Breaking News

ಹೆಂಡತಿ ಜೊತೆ ಜಗಳ, ಸಂಧಾನಕ್ಕೆ ಬಂದಿದ್ದ ಮ್ಯಾರೇಜ್ ಬ್ರೋಕರ್ ಬರ್ಬರ ಹತ್ಯೆ!

ಮದುವೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬರಿಗೆ ಚಾಕು ಇರಿದು ಕೊಲೆ ಮಾಡಿರುವ ಘಟನೆ ಮಂಗಳೂರಿನ ಹೊರವಲಯದ ವಳಚ್ಚಿಲ್‌ನಲ್ಲಿ ಗುರುವಾರ ನಡೆದಿದೆ. ಸುಲೇಮಾನ್ ತಮ್ಮ ಇಬ್ಬರು ಪುತ್ರರಾದ ರಿಯಾಬ್ ಮತ್ತು ಶಿಯಾಬ್ ಜೊತೆ ಗುರುವಾರ ರಾತ್ರಿ ಮುಸ್ತಾಫಾ ಮನೆಗೆ ತೆರಳಿದ್ದರು. ಮಾತುಕತೆ ಫಲಪ್ರದವಾಗದೆ, ಮುಸ್ತಾಫಾ ಅವರನ್ನು ಮನೆಯಿಂದ ಹೊರಡುವಂತೆ ಹೇಳಿದ್ದಾನೆ. ಬಳಿಕ ಏಕಾಏಕಿ ಸಿಟ್ಟಾದ ಮುಸ್ತಾಫಾ ಮನೆಯಲ್ಲಿದ್ದ ಚೂರಿಯನ್ನು ತೆಗೆದುಕೊಂಡು ಸುಲೇಮಾನ್ ಅವರ ಕುತ್ತಿಗೆಗೆ ಇರಿದಿದ್ದಾನೆ. ಗಾಯಗೊಂಡ ಸುಲೇಮಾನ್ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.ಶಿಯಾಬ್ ಮತ್ತು ರಿಯಾಬ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಕಮಿಷನರ್ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Share News

About BigTv News

Check Also

ಮಸೀದಿ ಮುಂದೆ ಗಣೇಶನ ಮೂರ್ತಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ” ; ಇನ್‌ಸ್ಪೆಕ್ಟರ್ ಧಮ್ಕಿ

ಮೈಸೂರು: ಗಣೇಶೋತ್ಸವದ ವೇಳೆ ಮೆರವಣಿಗೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ ನೀಡಿರುವ ಎಚ್ಚರಿಕೆ ಚರ್ಚೆಗೆ ಕಾರಣವಾಗಿದೆ. …

Leave a Reply

Your email address will not be published. Required fields are marked *