Breaking News

ಗುಜರಾತ್ :ಮಾದಕ ದ್ರವ್ಯ ನೀಡಿ ಯುವತಿಯ ಸಾಮೂಹಿಕ ಅತ್ಯಾಚಾರ, ಬಿಜೆಪಿ ನಾಯಕನ ಬಂಧನ!

23 ವರ್ಷದ ಯುವತಿಯೊಬ್ಬಳಿಗೆ ಪಾನೀಯದಲ್ಲಿ ಮಾದಕ ದ್ರವ್ಯ ಬೆರೆಸಿ ಕುಡಿಸಿ, ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಆಕೆಯನ್ನು ಹೋಟೆಲ್ ಒಂದಕ್ಕೆ ಕರೆದೊಯ್ದು, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ಗುಜರಾತ್‌ನ ಸೂರತ್ ನಗರದಲ್ಲಿ ನಡೆದಿದೆ.ತನಗೆ ಪ್ರಜ್ಞೆ ಮರಳಿದ ಕೂಡಲೇ ಪೊಲೀಸರನ್ನು ಸಂಪರ್ಕಿಸಿರುವ ಸಂತ್ರಸ್ತ ಯುವತಿಯು, ಈ ಸಂಬಂಧ ಅಧಿಕೃತ ದೂರು ದಾಖಲಿಸಿದ್ದಾಳೆ. ಇದರ ಬೆನ್ನಿಗೇ ಕ್ಷಿಪ್ರ ಕ್ರಮ ಕೈಗೊಂಡಿರುವ ಪೊಲೀಸರು, ಆರೋಪಿಗಳಾದ ಆದಿತ್ಯ ಉಪಾಧ್ಯಾಯ ಹಾಗೂ ಆತನ ಸಹಚರ ಗೌರವ್ ಸಿಂಗ್‌ನನ್ನು ಬಂಧಿಸಿದ್ದಾರೆ.ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಆದಿತ್ಯ ಉಪಾಧ್ಯಾಯನನ್ನು ತಕ್ಷಣವೇ ಆತನ ಹುದ್ದೆಯಿಂದ ಬಿಜೆಪಿ ಅಮಾನತುಗೊಳಿಸಿದೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *