Breaking News

ಮಂಗಳೂರು :ಬೇಕರಿ ಮಾಲೀಕನ ಮೇಲೆ ಹಲ್ಲೆಗೆ ಯತ್ನ!

ಬೇಕರಿ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಟೆಂಪೋ ರಿಕ್ಷಾವನ್ನ ಬದಿಗೆ ಸರಿಸಲು ಹೇಳಿದ್ದಕ್ಕೆ ಕುಪಿತಗೊಂಡ ಚಾಲಕ ತನ್ನ ಸಹಚರ ರಿಕ್ಷಾ ಚಾಲಕನೊಂದಿಗೆ ಬೇಕರಿಗೆ ನುಗ್ಗಿ ಮಾಲಕ ಮತ್ತು ಅವರ ತಾಯಿಗೆ ಹಲ್ಲೆಗೆ ಯತ್ನಿಸಿದ್ದು, ರಿಕ್ಷಾ ಚಾಲಕರ ಪುಂಡಾಟಿಕೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.ತೊಕ್ಕೊಟ್ಟು ಜಂಕ್ಷನ್ ನಲ್ಲಿ ಗುರುವಾರ ಮಧ್ಯಾಹ್ನ ಘಟನೆ ನಡೆದಿದೆ. ಮಾರುತಿ ಸ್ವೀಟ್ಸ್ ಮಾಲಕರಾದ ಅಶ್ವಿನ್ ಕುಮಾರ್ ಅವರು ತಮ್ಮ ಬೇಕರಿ ಮುಂದುಗಡೆಯೇ ಅಡ್ಡಲಾಗಿ ನಿಲ್ಲಿಸಿದ್ದ ಟೆಂಪೋ ರಿಕ್ಷಾವನ್ನ ಸ್ವಲ್ಪ ಬದಿಗೆ ಸರಿಸುವಂತೆ ಚಾಲಕ ಬಶೀರ್ ನಲ್ಲಿ ಹೇಳಿದ್ದಾರೆ. ಇಷ್ಟಕ್ಕೇ ಕುಪಿತಗೊಂಡ ಚಾಲಕ ಬಶೀರ್ ತನ್ನ ಸಹಚರ ರಿಕ್ಷಾ ಚಾಲಕನಾದ ಇಶಾನ್ ನೊಂದಿಗೆ ಬೇಕರಿಗೆ ನುಗ್ಗಿ ಮಾಲಕ ಅಶ್ವಿನ್ ಅವರಿಗೆ ಹಲ್ಲೆ ನಡೆಸಲು ಮುಂದಾಗಿದ್ದಾನೆ. ಬಶೀರ್ ಮತ್ತು ಇಶಾನ್ ಜೊತೆ ಮತ್ತೆ ಕೆಲವು ರಿಕ್ಷಾ ಚಾಲಕರು ದಾಂಧಲೆಗೆ ಕುಮ್ಮಕ್ಕು ನೀಡಿದ್ದಾರೆ.ಉಳ್ಳಾಲ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *