Breaking News

ಬೆಂಗಳೂರು :ಮದ್ಯದ ಅಮಲಿನಲ್ಲಿ ರಂಪಾಟ, ಕೆಳಗೆ ಬಿದ್ದ ಆಟೊ ಚಾಲಕ ಸಾವು!

ರಂಗಸ್ವಾಮಿ ಹಾಗೂ ವಿನಯ್‌ ಕುಮಾರ್ ವೃತ್ತಿಯಲ್ಲಿ ಆಟೊ ಚಾಲಕರು. ಒಂದೇ ಬಡಾವಣೆಯ ನಿವಾಸಿಗಳು. ಮೇ 18ರ ರಾತ್ರಿ ಬಸವನಕಟ್ಟೆಯ ಬಾರ್‌ ಬಳಿ ರಂಗಸ್ವಾಮಿ ಕುಡಿದು ರಂಪಾಟ ಮಾಡುತ್ತಾ ಅಕ್ಕಪಕ್ಕದ ಮನೆಯವರನ್ನು ನಿಂದಿಸುತ್ತಿದ್ದರು. ಇದನ್ನು ವಿನಯ್ ಪ್ರಶ್ನಿಸಿದ್ದರು. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ತಳ್ಳಾಟ, ನೂಕಾಟ ಸಂಭವಿಸಿದಾಗ ರಂಗಸ್ವಾಮಿ ಕೆಳಗೆ ಬಿದ್ದರು’ ಎಂದು ಪೊಲೀಸರು ತಿಳಿಸಿದರು.ಕೆಳಗೆ ಬಿದ್ದ ಗಾಯಗೊಂಡಿದ್ದ ರಂಗಸ್ವಾಮಿ ತಲೆಗೆ ಗಂಭೀರ ಪೆಟ್ಟಾಗಿತ್ತು. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಆರೋಪಿಯನ್ನು ಬಂಧಿಸಿ, ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಹೇಳಿದರು.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *