Breaking News

ಚಲಿಸುತ್ತಿದ್ದ ಬಸ್ಸಿನ ಕಿಟಕಿ ಏರಿ ಬಸ್ ಡ್ರೈವರ್​​ ಮೇಲೆ ಹಲ್ಲೆಗೆ ಯತ್ನಿಸಿದ ಆಟೋ ಚಾಲಕ!!

ಹೈದರಾಬಾದ್​​ನ ಮಿಯಾಪುರದಲ್ಲಿ ಆರ್ ಟಿಸಿ ಬಸ್ ಚಾಲಕನ ಮೇಲೆ ಆಟೋ ಚಾಲಕನೊಬ್ಬ ಹಲ್ಲೆಗೆ ಯತ್ನಿಸಿದ್ದಾನೆ. ಆಟೋ ಹೋಗಲು ದಾರಿ ಬಿಡಲಿಲ್ಲ ಎನ್ನುವ ಕಾರಣಕ್ಕೆ ಆಟೋ ಚಾಲಕನು ಕೋಪಗೊಂಡು ಹಲ್ಲೆ ಮಾಡಲು ಮುಂದಾಗಿದ್ದಾನೆ. ಆರ್‌ಟಿಸಿ ಬಸ್ ಕಾಚೆಗುಡದಿಂದ ಪತೆಂಚೇರಿಗೆ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.ವಿಡಿಯೋದಲ್ಲಿ ಆಟೋ ಚಾಲಕನು ಬಸ್ ಚಾಲಕನ ಮೇಲೆ ಹಲ್ಲೆಗೆ ಯತ್ನಿಸುತ್ತಿರುವುದನ್ನು ನೋಡಬಹುದು. ಆಟೋ ಹೋಗಲು ದಾರಿ ಬಿಡಲಿಲ್ಲ ಎನ್ನುವ ಕಾರಣಕ್ಕೆ ಆಟೋ ಚಾಲಕನು ಕೋಪಗೊಂಡಿದ್ದಾನೆ. ಚಲಿಸುತ್ತಿದ್ದ ಬಸ್ಸಿನ ಕಿಟಕಿ ಹತ್ತಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಅದೇ ವೇಳೆ ಬಸ್ ಚಾಲಕನು ಪ್ರಯಾಣಿಕರ ಬಳಿ ವಿಡಿಯೋ ಮಾಡಿ ಎಂದಿದ್ದಾನೆ. ಇತ್ತ ಆಟೋ ಚಾಲಕನು ಗಾಡಿಯನ್ನು ಸೈಡ್ ಗೆ ಹಾಕಿ ಎನ್ನುತ್ತಾ, ಬಸ್ಸಿನೊಳಗೆ ನುಗ್ಗಿ ಚಾಲಕನ ಮೊಬೈಲ್ ಕಿತ್ತುಕೊಳ್ಳುವುದನ್ನು ಕಾಣಬಹುದು. ಆ ಬಳಿಕ ಆಟೋ ಚಾಲಕ ಹಾಗೂ ಬಸ್ ಚಾಲಕನ ನಡುವೆ ವಾಗ್ವಾದ ನಡೆದಿದೆ. ಸದ್ಯಕ್ಕೆ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *