Breaking News

ಬೆಳ್ತಂಗಡಿ: ಜಾತಿ ನಿಂದನೆ ಮಾಡಿ ಯುವಕನಿಗೆ ಕೊಲೆ ಬೆದರಿಕೆ, ಇಬ್ಬರ ಬಂಧನ!

ಶಿಬಾಜೆಯ ಕುರುಂಜ ಮನೆಯ ಎದುರು ನಿಂತಿದ್ದ ವೇಳೆ ಸ್ಥಳೀಯ ನಿವಾಸಿ ಪ್ರವೀಣ್ ಎಂಬಾತನ ಮೇಲೆ ಆನಂದ ಗೌಡ ಹಾಗೂ ತಿಮ್ಮಪ್ಪ ಪೂಜಾರಿ ಹಲ್ಲೆಗೆ ಯತ್ನಿಸಿದ್ದರು. ಆನಂದ ಗೌಡ ಕೈಯಲ್ಲಿ ಕೊಡಲಿಯನ್ನು ಹಿಡಿದುಕೊಂಡು ಹಾಗೂ ತಿಮ್ಮಪ್ಪ ಪೂಜಾರಿ ಕಬ್ಬಿಣದ ಸಲಾಕೆಯನ್ನು ಹಿಡಿದುಕೊಂಡು ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿ ಹಲ್ಲೆ ಮಾಡಲು ಬಂದಿದ್ದು, ಈ ವೇಳೆ ಪ್ರವೀಣ್ ತಪ್ಪಿಸಿಕೊಂಡು ಮನೆಯೊಳಗೆ ಹೋಗಿ ಬಾಗಿಲು ಹಾಕಿದ್ದಾನೆ. ಈ ವೇಳೆ ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿದ ಆರೋಪಿಗಳು ನಿನ್ನನ್ನು ಕೊಲ್ಲದೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿರುವುದಾಗಿ ಪ್ರವೀಣ್‌ ಅವರು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದರು.ಈ ಬಗ್ಗೆ ಪ್ರಕರಣ‌ ದಾಖಲಿಸಿಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ಮೇ22 ರಂದು ಬಂಧಿಸಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *