Breaking News

ಮಧುಗಿರಿ: ಅವೈಜ್ಞಾನಿಕ ಕಾಮಗಾರಿ,ಜಿಲ್ಲಾಧಿಕಾರಿ ತರಾಟೆ!

15ನೇ ವಾರ್ಡ್‌ನಲ್ಲಿ ಯುಜಿಡಿ ಪೈಪ್‌ಲೈನ್ ಮತ್ತು ಅಮೃತ ಯೋಜನೆಯ ಪೈಪ್‌ಲೈನ್‌ಗಳು ಒಂದಕ್ಕೊಂದು ಸೇರಿಕೊಂಡಿದ್ದು, ಈ ಬಗ್ಗೆ ಸ್ಥಳೀಯರು ಜಿಲ್ಲಾಧಿಕಾರಿಗೆ ದೂರು ನೀಡಿದ್ದರು.yಜಿಲ್ಲಾಧಿಕಾರಿ ಸ್ಥಳ ಪರಿಶೀಲಿಸಿದಾಗ ಮುಂದಿನ ದಿನಗಳಲ್ಲಿ ಯುಜಿಡಿಯ ಪೈಪ್‌ಲೈನ್‌ನಲ್ಲಿ ಹಾದು ಹೋಗುವ ನೀರು ಮತ್ತು ಶುದ್ಧ ಕುಡಿಯುವ ನೀರು ಸೇರಿಕೊಳ್ಳುವ ಸಂಭವ ಇರುತ್ತದೆ. ಇಂತಹ ಸಮಸ್ಯೆಗಳನ್ನು ನೋಡಿಕೊಂಡು ಸರಿಯಾಗಿ ಕೆಲಸ ಮಾಡಬೇಕು ಎಂದು ಗುತ್ತಿಗೆದಾರರು ಮತ್ತು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.ಪುರಸಭೆ ಮುಖ್ಯ ಅಧಿಕಾರಿ ಸುರೇಶ್, ಇಂಜಿನಿಯರ್ ಜಿ.ಸಂಜೀವ್ ಮೂರ್ತಿ, ಪುರಸಭೆ ಮಾಜಿ ಸದಸ್ಯ ರಮೇಶ್ ಹಾಗೂ ಸಾರ್ವಜನಿಕರು ಹಾಜರಿದ್ದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *