Breaking News

ಮೈಮೇಲೆ ಕಸದ ರಾಶಿ ಸುರಿದ ಪೌರ ಸಿಬ್ಬಂದಿ; ಮರದಡಿ ನಿದ್ದೆ ಮಾಡುತ್ತಿದ್ದ ವ್ಯಕ್ತಿ ಸಾವು!

ಮರದಡಿ ನಿದ್ದೆ ಮಾಡುತ್ತಿದ್ದ 45 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರ ಮೇಲೆ ಪೌರ ಸಿಬ್ಬಂದಿ ಕಸದ ರಾಶಿ ಸುರಿದ ಪರಿಣಾಮ ನಿದ್ರಿಸುತ್ತಿದ್ದ ವ್ಯಕ್ತಿ ಕಸದ ರಾಶಿಯಡಿ ಸಿಲುಕಿ ಮೃತಪಟ್ಟ ಅಪರೂಪದ ಘಟನೆ ಉತ್ತರ ಪ್ರದೇಶದ ಬರೇಲಿ ನಗರದಲ್ಲಿ ನಡೆದಿದೆ.ಬರೇಲಿ ನಗರದ ಬರದಾರಿ ಪ್ರದೇಶದಲ್ಲಿ ಈ ದುರಂತ ಸಂಭವಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಇದು ಅಸಹಜ ಸಾವು ಎನ್ನುವುದನ್ನು ಅಟಾಪ್ಸಿ ವರದಿ ದೃಢಪಡಿಸಿದೆ. ಇದು ನಿರ್ಲಕ್ಷ್ಯದ ಪ್ರಕರಣ ಎಂದು ಸರ್ಕಲ್ ಅಧಿಕಾರಿ ಪಂಕಜ್ ಶ್ರೀವಾಸ್ತವ ಹೇಳಿದ್ದಾರೆ.ಆರಂಭಿಕ ತನಿಖೆಯ ಬಳಿಕ ನೈರ್ಮಲ್ಯ ಗುತ್ತಿಗೆದಾರ ನಯೀಮ್ ಶಾಸ್ತ್ರಿ ವಿರುದ್ಧ ಭಾರತೀಯ ನ್ಯಾಯಸಂಹಿತೆಯ ಸೆಕ್ಷನ್ 106ರ ಅಡಿಯಲ್ಲಿ ಬರದಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ವಿವರಿಸಿದ್ದಾರೆ.

Share News

About BigTv News

Check Also

ತೋಟದಲ್ಲಿ ಗಾಂಜಾ ಗಿಡ ಬೆಳೆದು ಸಿಕ್ಕಿಬಿದ್ದ ಪೊಲೀಸಪ್ಪನ ಪುತ್ರ: ಅತ್ತ ತಂದೆಯಿಂದ ಜಾಗೃತಿ, ಇತ್ತ ಮಗನಿಂದ ಕುಕೃತ್ಯ!

ತುಮಕೂರು: ಡ್ರಗ್ಸ್‌ ಮುಕ್ತ ಸಮಾಜ ನಿರ್ಮಾಣಕ್ಕೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುತ್ತಿರುವ ನಡುವೆಯೇ, ಪೊಲೀಸ್ ಸಿಬ್ಬಂದಿಯ ಪುತ್ರನೇ ಗಾಂಜಾ ಗಿಡ …

Leave a Reply

Your email address will not be published. Required fields are marked *