ಅಂಕಿಹಳ್ಳಿ ಗ್ರಾಮದಲ್ಲಿನ ಕರುಣ್ ಎಂಬುವವರ ಕಾಫಿ ತೋಟದ 12 ಮಂದಿ ಮಹಿಳಾ ಕಾರ್ಮಿಕರು ಕೆಲಸ ಮಾಡುತ್ತಿದ್ದರು.ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ಮಾಡಿದ್ದು, ಕೂಡಲೇ ಎಚ್ಚೆತ್ತ ಕಾರ್ಮಿಕರು ಅಲ್ಲಿಂದ ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ. ಆದರೆ ಚಂದ್ರಮ್ಮ ಓಡಲು ಆಗದೆ ಕೆಳಕ್ಕೆ ಬಿದ್ದಿದ್ದಾರೆ, ಈ ವೇಳೆ ಕಾಡಾನೆ ದಾಳಿ ಮಾಡಿದೆ.ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಚಂದ್ರಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

