ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಬಸ್ ಚಲಾಯಿಸುತ್ತಿದ್ದಾಗ ಚಾಲಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ವೇಳೆ ನಿರ್ವಾಹಕ ಬಸ್ ನಿಲ್ಲಿಸಿ ಸಂಭಾವ್ಯ ಅಪಘಾತವನ್ನು ತಪ್ಪಿಸಿದ್ದಾರೆ.ಬಸ್ ಕನಕಂಪಟ್ಟಿ ದಾಟುತ್ತಿದ್ದಂತೆ ಚಾಲಕ ಪ್ರಭು ಕಂಡಕ್ಟರ್‌ಗೆ ಕರೆ ಮಾಡಿ ನನಗೆ ಜೋರಾಗಿ ಎದೆ ನೋಯುತ್ತಿದೆ ಎಂದು ಹೇಳಲು ಪ್ರಯತ್ನಿಸಿದರು. ಆದರೆ ಕಂಡೆಕ್ಟರ್ ಪ್ರತಿಕ್ರಿಯಿಸುವ ಮೊದಲೇ ಪ್ರಭು ಕುಸಿದು ಬಿದ್ದರು. ಹೃದಯಾಘಾತವಾಗಿ ಕುಸಿದು ಬಿದ್ದ ಚಾಲಕನಿಗೆ ಕಂಡಕ್ಟರ್ ಮತ್ತು ಪ್ರಯಾಣಿಕರು ಸಹಾಯಕ್ಕೆ ಧಾವಿಸುವುದು. ಕಂಡೆಕ್ಟರ್ ಬ್ರೇಕ್ ಹಿಡಿದು ಬಸ್ ಅನ್ನು ನಿಯಂತ್ರಣಕ್ಕೆ ತರುವುದು ಕಂಡು ಬಂದಿದೆ.ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಮತ್ತು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





