Breaking News

ಬೆಂಗಳೂರ: ಹೆಬ್ಬಾಳ ಫ್ಲೈಓವರ್‌ ಮೇಲೆ ಅಪಘಾತ, ಲಾರಿ ಚಾಲಕ ಸಾವು!

ಬೆಂಗಳೂರಿಗೆ ಬರುವ ಮಾರ್ಗದಲ್ಲಿ ಮಧ್ಯರಾತ್ರಿ ಸುಮಾರು ಎರಡು ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ. 10 ಚಕ್ರಗಳ ಓಪನ್ ಬಾಡಿ ವಾಹನ, ಬಿಬಿಎಂಪಿ ಕಸದ ಲಾರಿ ಮತ್ತು ಎರ್ಟಿಗಾ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಕಸ ತುಂಬಿದ್ದ ಲಾರಿಯ ಮೇಲೆ ಕಲ್ಲು ತುಂಬಿದ್ದ ಟ್ರಕ್ ಪಲ್ಟಿಯಾಗಿದ್ದು, ಇದರ ಪರಿಣಾಮವಾಗಿ ಕಸದ ಲಾರಿ ಚಾಲಕ ಫಯಾಜ್ ಅಹಮ್ಮದ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಅಪಘಾತದಲ್ಲಿ ಮೃತಪಟ್ಟ ಚಾಲಕನ ದೇಹವನ್ನು ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಲಾಗಿದೆ. ಹೆಬ್ಬಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಾಹನಗಳನ್ನು ತೆರವುಗೊಳಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *