ಮಹಿಳೆಯರಿಂದ ಚಿನ್ನಾಭರಣ ದೋಚಿದ್ದ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿ, ಅಂದಾಜು ₹48 ಲಕ್ಷ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳು, ಕಾರು, ಸ್ಕೂಟರ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.ಮನೆಯಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ವಿಜಯನಗರದ ಜೆ.ಸಯ್ಯದ್ ಅಹಮದ್ (43) ಮತ್ತು ಬೆಂಗಳೂರಿನ ಕೆ.ಆರ್.ಪುರಂ, ದೇವಸಂದ್ರದ ತಸ್ಲೀಂ ಪಾಷಾ (43) ಈ ಇಬ್ಬರನ್ನು ಮಳವಳ್ಳಿ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

