ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಸಿಕ್ಕಿದ್ದಕ್ಕೆ ವಿಜಯೋತ್ಸವ ಆಚರಿಸಿದ ಏಳು ಆರೋಪಿಗಳನ್ನು ಹಾನಗಲ್ ಠಾಣೆ ಪೊಲೀಸರು ಬಂಧಿಸಿದ್ದು, ಎಲ್ಲರನ್ನೂ ನ್ಯಾಯಾಂಗ ಬಂಧನಕ್ಕೆ ವಹಿಸಿ ನ್ಯಾಯಾಲಯ ಶನಿವಾರ ಆದೇಶ ಹೊರಡಿಸಿದೆ.ಜೈಲಿನಿಂದ ಗುರುವಾರ ರಾತ್ರಿ ಬಿಡುಗಡೆಯಾಗಿದ್ದ ಆರೋಪಿಗಳು, ಹಾವೇರಿಯಿಂದ ಅಕ್ಕಿಆಲೂರುವರೆಗೂ ಕಾರು ಹಾಗೂ ಬೈಕ್‌ನಲ್ಲಿ ರೋಡ್ ಶೋ ಆಚರಿಸಿದ್ದರು.ತಲೆಮರೆಸಿಕೊಂಡಿದ್ದ ಆರೋಪಿಗಳಾದ ಅಪ್ತಾಬ ಮಖಬೂಲಅಹ್ಮದ್ ಚಂದನಕಟ್ಟಿ, ಮದರಸಾಬ್ ಮಹ್ಮದಸಾದಿಕ ಮಂಡಕ್ಕಿ ಹಾಗೂ ತೌಸೀಪ ಖಾಸಿಂಸಾಬ ಚೌಟಿಯನ್ನು ಶಿರಾಳಕೊಪ್ಪದಲ್ಲಿ ಬಂಧಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

