ರಾಜ್ಯದಲ್ಲಿ ಹೊಸದಾಗಿ ಇನ್ನೂ 184 ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದ ಹಿನಕಲ್‌ನಲ್ಲಿ 9 ಇಂದಿರಾ ಕ್ಯಾಂಟೀನ್‌ಗಳನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ಮೊದಲ ಬಾರಿ ಮುಖ್ಯಮಂತ್ರಿಯಾಗಿ ಇಂದಿರಾ ಕ್ಯಾಂಟೀನ್‌ಗಳನ್ನು ಬಡವರು, ಕೂಲಿ ಕಾರ್ಮಿಕರು, ಆಸ್ಪತ್ರೆಗಳಿಗೆ ಬರುವ ಜನರ ಹಸಿವನ್ನು ಕಡಿಮೆ ದರದಲ್ಲಿ ನೀಗಿಸುವ ಉದ್ದೇಶದಿಂದ ಆರಂಭಿಸಿದೆ ಎಂದರು.ಹಿನಕಲ್‌ನಲ್ಲೇ ಇಂದಿರಾ ಕ್ಯಾಂಟೀನ್‌ಗಳನ್ನು ಉದ್ಘಾಟಿಸಿದ್ದು, ಹೊಸದಾಗಿ 184 ಕ್ಯಾಂಟೀನ್‌ಗಳನ್ನು ಆರಂಭಿಸುತ್ತಿದ್ದೇವೆ ಎಂದು ಅವರು ಹೇಳಿದರು.ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಪೌರಾಡಳಿತ ಸಚಿವ ರಹೀಂ ಖಾನ್, ಶಾಸಕರಾದ ಜಿ.ಟಿ. ದೇವೇಗೌಡ, ತನ್ವೀರ್ ಸೇಠ್, ಕೆ. ಹರೀಶ್ ಗೌಡ, ಡಿ. ರವಿಶಂಕರ್, ಡಾ. ಯತೀಂದ್ರ ಸಿದ್ದರಾಮಯ್ಯ, ಡಾ.ಡಿ. ತಿಮ್ಮಯ್ಯ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಜಿಪಂ ಸಿಇಒ ಎಸ್. ಯುಕೇಶ್ ಕುಮಾರ್ ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

