Breaking News

ಯಾದಗಿರಿ: ಕಾಂಗ್ರೆಸ್ ಕಚೇರಿಗೆ ಬೆಂಕಿ ಇಟ್ಟ, ಆರೋಪಿ ಅರೆಸ್ಟ್!

ಜಿಲ್ಲಾ ಕಾಂಗ್ರೆಸ್‌ನ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದ ತನ್ನ ಪತ್ನಿಯನ್ನು ಕೆಳಗಿಳಿಸಿ ಆಕೆಯ ಸ್ಥಾನದಲ್ಲಿ ಬೇರೊಬ್ಬರನ್ನು ನೇಮಿಸಿದ್ದಕ್ಕೆ ಆಕ್ರೋಶಗೊಂಡ ಪತಿ, ಜಿಲ್ಲಾ ಕಾಂಗ್ರೆಸ್‌ ಕಚೇರಿಗೇ ಬೆಂಕಿಯಿಟ್ಟ ಘಟನೆ ಯಾದಗಿರಿಯಲ್ಲಿ ನಡೆದಿದೆ.ಪತ್ನಿಯ ಸ್ಥಾನಕ್ಕೆ ನಿಲೋಫರ್ ಬಾದಲ್‌ರನ್ನು ಆಯ್ಕೆ ಮಾಡಿದ್ದಕ್ಕೆ ಮಂಜುಳಾ ಅವರ ಪತಿ, ಪಿಯು ಉಪನ್ಯಾಸಕನಾಗಿರುವ ಶಂಕರ್ ಗೂಳಿ ಆಕ್ರೋಶಗೊಂಡಿದ್ದ. ಹೀಗಾಗಿ, ಶಂಕರ್‌ ಗೂಳಿ ರೌಡಿಶೀಟರ್‌ ಬಾಪುಗೌಡ ಅಗತೀರ್ಥ ಎಂಬಾತನ ಜೊತೆಗೂಡಿ ಶನಿವಾರ ಬೆಳಗಿನ ಜಾವ ನಗರದ ಕನಕದಾಸ ವೃತ್ತದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯ ಕಟ್ಟಡದ ಬಾಗಿಲು ಮತ್ತು ಕಿಟಕಿಗೆ ಪೆಟ್ರೋಲ್ ಸುರುವಿ, ಬೆಂಕಿಯಿಟ್ಟಿದ್ದಾನೆ.ಆರೋಪಿ ಶಂಕರ್ ಗೂಳಿ ಎಂಬಾತನನ್ನು ಬಂಧಿಸಲಾಗಿದ್ದು, ಕೃತ್ಯಕ್ಕೆ ನೆರವಾದ ಮತ್ತೊಬ್ಬನಿಗಾಗಿ ಪೊಲೀಸರು ಹುಟುಕಾಟ ನಡೆಸಿದ್ದಾರೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *