Breaking News

ದೇವನಹಳ್ಳಿ :ರೇವ್ ಪಾರ್ಟಿ ಮೇಲೆ ದಾಳಿ, 30ಕ್ಕೂ ಹೆಚ್ಚು ಯುವಕ-ಯುವತಿಯರು ವಶಕ್ಕೆ!

ನಿನ್ನೆ ರಾತ್ರಿಯಿಂದ ನಡೆಯುತ್ತಿದ್ದ ರೇವ್ ಪಾರ್ಟಿಯಲ್ಲಿ ಸುಮಾರು 30ಕ್ಕೂ ಹೆಚ್ಚು ಯುವಕ-ಯುವತಿಯರು ಭಾಗಿಯಾಗಿದ್ದು, ಕುಡಿದ ಮತ್ತಿನಲ್ಲಿ ತೇಲಾಡಿದ್ದಾರೆ.ಇನ್ನು ದಾಳಿ ವೇಳೆ ಕೊಕೇನ್, ಹೈಡ್ರೋ ಡ್ರಗ್ಸ್ ಮತ್ತು ಗಾಂಜಾ ಪತ್ತೆ ಆಗಿದ್ದು, ವಶಕ್ಕೆ ಪಡೆಯಲಾಗಿದೆ. ಸ್ಥಳೀಯರು ನೀಡಿದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. ರೇವ್ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ 10 ಯುವತಿಯರು, 20 ಯುವಕರ ತಪಾಸಣೆ ಮಾಡಲಾಗಿದ್ದು, ಸದ್ಯ ವಶಕ್ಕೆ ಪಡೆಯಲಾಗಿದೆ. ದೇವನಹಳ್ಳಿ ಎಸಿಪಿ ನವೀನ್ ನೇತೃತ್ವದಲ್ಲಿ ಎಲ್ಲರನ್ನೂ ವಿಚಾರಣೆ ಮಾಡಲಾಗಿದೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *