Breaking News

ಚಿಕ್ಕಮಗಳೂರು : ಮಳೆಯ ಅಬ್ಬರ, ಚಾಲಕನ ನಿಯಂತ್ರಣ ತಪ್ಪಿ ನದಿಗೆ ಇಳಿದ ಕಾರ್!

ಚಿಕ್ಕಮಗಳೂರಿನಲ್ಲಿ ಗಾಳಿ-ಮಳೆ ಅಬ್ಬರ ಮುಂದುವರಿದಿದ್ದು, ಭಾರೀ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿಗರ ಕಾರು ಪಲ್ಟಿಯಾದ ಘಟನೆ ಮೂಡಿಗೆರೆ ತಾಲೂಕಿನ ಚಕ್ಕಮಕ್ಕಿ ಗ್ರಾಮದಲ್ಲಿ ನಡೆದಿದೆ.ಕಾರು ಪಲ್ಟಿಯಾಗಿ ಹೇಮಾವತಿ ನದಿಯ ಉಪನದಿಯ ಹಳ್ಳಕ್ಕೆ ಬಿದ್ದಿದ್ದು, ಕೂಡಲೇ ಸ್ಥಳೀಯರು ಕಾರಿನಲ್ಲಿದ್ದವರನ್ನು ರಕ್ಷಿಸಿದ್ದಾರೆ. ಸಮಾಜ ಸೇವಕ ಆರೀಫ್ ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ಹಳ್ಳಕ್ಕೆ ಇಳಿದು ಕಾರಿನಲ್ಲಿದ್ದವರನ್ನು ರಕ್ಷಣೆ ಮಾಡಿದ್ದಾರೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *