ಕೊಪ್ಪ ತಾಲೂಕು ಜಯಪುರ ಸಮೀಪದ ಕೊಗ್ರೆಯ ಜಾಳ್ಮಾರದಲ್ಲಿ ಆಟೋ ಮೇಲೆ ಮರ ಬಿದ್ದು, ಚಾಲಕ ರತ್ನಾಕರ (38) ಮೃತಪಟ್ಟಿದ್ದಾರೆ.ಚಿಕ್ಕಮಗಳೂರು ತಾಲೂಕು ಸುತ್ತಮುತ್ತ ಮಳೆಯ ಅಬ್ಬರ ಜೋರಾಗಿದ್ದು, ವಿದ್ಯುತ್ ಕಂಬಗಳ ಮೇಲೆ ಮರ ಬಿದ್ದು, ನಗರದ ಕೆಲವು ಭಾಗ ಹಾಗೂ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.ಮಲೆನಾಡು ಮತ್ತು ಬಯಲುಸೀಮೆ ಭಾಗದಲ್ಲಿ ಎಡಬಿಡದೆ ಮಳೆಯಾಗುತ್ತಿದ್ದು, ಕಾರ್ಮಿಕರು, ಮಾಲೀಕರು ಮನೆಯಲ್ಲೇ ಉಳಿದುಕೊಳ್ಳುವಂತಾಗಿದೆ. ನದಿಗಳ ನೀರಿನ ಮಟ್ಟ ಹಳ್ಳಕೊಳ್ಳ, ಕೆರೆಕಟ್ಟೆಗಳು ತುಂಬಿ ಹರಿಯುತ್ತಿವೆ. ಒಟ್ಟಾರೆ ಭಾರೀ ಮಳೆಯಿಂದ ಜಿಲ್ಲೆಯ ಜನಜೀವನ ಅಸ್ತವ್ಯಸ್ತವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

