ಮೈನಿಂಗ್ ಸಾಗಿಸುತ್ತಿದ್ದ ಟಿಪ್ಪರ್ ಗೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಸಂಡೂರಿನ ಜೈ ಸಿಂಗಪುರ ಬಳಿ ಈ ಅಪಘಾತ ಸಂಭವಿಸಿದೆ.ಅಪಘಾತದಲ್ಲಿ ಮತ್ತೋರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಕೊಪ್ಪಳ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಸಂಡೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

