ಬೇವಾರ್ ಜಿಲ್ಲೆಯ ರಾಯಪುರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. ಸ್ಥಳೀಯ ರೌಡಿಶೀಟರ್ ಒಬ್ಬ ತನ್ನದೇ ಡ್ರೈವರ್‌ನನ್ನು ಜೆಸಿಬಿ ಯಂತ್ರಕ್ಕೆ ತಲೆಕೆಳಗಾಗಿ ನೇತುಹಾಕಿ, ಬೆಲ್ಟ್‌ನಿಂದ ಅಮಾನವೀಯವಾಗಿ ಹಲ್ಲೆ ನಡೆಸಿದ್ದಾನೆ.ವಿಡಿಯೋ ವೈರಲ್ ಆದ ಕೂಡಲೇ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಕಾಂಗ್ರೆಸ್ ರಾಜ್ಯಾಧ್ಯಕ್ಷ ಗೋವಿಂದ್ ಸಿಂಗ್ ದೋತಾಸರಾ ಅವರು ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ರಾಜಸ್ಥಾನದಲ್ಲಿ ಬಿಜೆಪಿ ಅಲ್ಲ, ಮಾಫಿಯಾಗಳ ಆಡಳಿತ ನಡೆಯುತ್ತಿದೆ” ಎಂದು ಈ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಇಂತಹ ಭೀಕರ ಘಟನೆಗಳು ಈ ಹಿಂದೆ ನಡೆದಿವೆ. ಮಾಫಿಯಾಗಳ ದಾಂಧಲೆ ಉತ್ತುಂಗದಲ್ಲಿದ್ದು, ಬಿಜೆಪಿಯ ದುರ್ಬಲ ಮತ್ತು ನಿರ್ಲಕ್ಷ್ಯದ ಆಡಳಿತದಿಂದಾಗಿ ಅಪರಾಧಿಗಳಿಗೆ ಕಾನೂನಿನ ಭಯವಿಲ್ಲ” ಎಂದು ಅವರು ಆರೋಪಿಸಿದ್ದಾರೆ. ಮಾಜಿ ಸಿಎಂ ಅಶೋಕ್ ಗೆಹ್ಲೋಟ್, ಚಿತ್ರಹಿಂಸೆ ನೀಡಿದ ಆರೋಪಿಯ ತಕ್ಷಣದ ಬಂಧನಕ್ಕೆ ಒತ್ತಾಯಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

