Breaking News

ಪೊಲೀಸರ ಮೇಲೆಯೇ ಕಾರು ಹತ್ತಿಸಿದ ಆರೋಪಿ!

ಮದ್ಯಪಾನ ಮಾಡಿದ ಮತ್ತಿನಲ್ಲಿವ್ಯಕ್ತಿ ಒಬ್ಬ ಒನ್​ ವೇಯಲ್ಲಿ ಕಾರು ನುಗ್ಗಿಸಿ ಹಲವು ವಾಹನಗಳಿಗೆ ಹಾನಿ ಉಂಟು ಮಾಡಿದ್ದಲ್ಲದೆ, ತಡೆಯಲು ಬಂದ ಪೊಲೀಸರ ಮೇಲೆಯೇ ಕಾರು ಹತ್ತಿಸಲು ಯತ್ನಿಸಿದ್ದಾನೆ. ಬೆಂಗಳೂರಿನ ಕೋರಮಂಗಲದ ಜ್ಯೋತಿ ನಿವಾಸ ಕಾಲೇಜು ಬಳಿ ಶನಿವಾರ ತಡರಾತ್ರಿ ಘಟನೆ ಸಂಭವಿಸಿದೆ.ಆರೋಪಿ ನಂದಕೃಷ್ಣ ಎಂಬಾತ ಪೊಲೀಸ್ ಬ್ಯಾರುಕೇಡ್​ಗೆ ಕಾರು ಗುದ್ದಿಸಿದ್ದಾನೆ. ಇದರಿಂದಾಗಿ ಪೊಲೀಸರೊಬ್ಬರ ಕಾಲಿಗೆ ಗಾಯವಾಗಿದೆ. ನಂತರ ಕಾರಿನ ಬಾಗಿಲು ತೆರೆಯುವಂತೆ ಪೊಲೀಸರು ಸೂಚನೆ ನೀಡಿದರೂ ನಂದಕೃಷ್ಣ ಪ್ರತಿಕ್ರಿಯಿಸುತ್ತಲೇ ಇರಲಿಲ್ಲ. ಹೀಗಾಗಿ ಪೊಲೀಸರೇ ಕಾರಿನ ಗಾಜು ಒಡೆದು ಆತನನ್ನು ಹೊರಗೆ ಎಳೆದು ತೆಗೆದಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *