ಕಬ್ಬಿಣದಅದಿರು ಸಾಗಿಸುತ್ತಿದ್ದ ಟಿಪ್ಪರ್ ಗೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ.ಸಂಡೂರಿನ ಜೈ ಸಿಂಗಪುರ ಬಳಿ ಈ ಅಪಘಾತ ಸಂಭವಿಸಿದೆ. ಇಬ್ಬರು ಮಕ್ಕಳು, ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ.ಅಪಘಾತದಲ್ಲಿ ಮತ್ತೋರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಕೊಪ್ಪಳ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಸಂಡೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

