ರಾಜ್ಯದಲ್ಲಿ ಕೃಷಿ ಪಂಪ್‌ಸೆಟ್ ಹೊರತುಪಡಿಸಿ ಹೊಸದಾಗಿ ವಿದ್ಯುತ್ ಸಂಪರ್ಕ ಪಡೆಯುವ ಯಾವುದೇ ಗ್ರಾಹಕರಿಗೆ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯಗೊಳಿಸಿರುವುದನ್ನು ಪುನರುಚ್ಚರಿಸಿರುವ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ), ಈ ಮೂಲಕ ಸ್ಮಾರ್ಟ್ ಮೀಟರ್ ವಿಷಯದಲ್ಲಿ ಉಂಟಾದ ಗೊಂದಲಕ್ಕೆ ತೆರೆ ಎಳೆದಿದೆ.ಈಗಾಗಲೇ ಸಾಂಪ್ರದಾಯಿಕ ಮೀಟರ್‌ಗಳನ್ನು ಹೊಂದಿರುವವರಿಗೆ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯವಲ್ಲ. ಗ್ರಾಹಕರು ಪ್ರಿಪೇಯ್ಡ ಮೀಟರ್ ಬಿಲ್ಲಿಂಗ್ ಇಚ್ಛಿಸಿದಲ್ಲಿ ಅವರ ಸ್ವಂತ ಖರ್ಚಿನಲ್ಲಿ ಸ್ಮಾರ್ಟ್ ಮೀಟರ್ ಅಳವಡಿಸಿಕೊಳ್ಳಬಹುದು ಎಂದೂ ಆದೇಶದಲ್ಲಿ ಹೇಳಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

