Breaking News

ಮದ್ಯದ ಅಮಲಿನಲ್ಲಿ ಹಣ್ಣಿನ ವ್ಯಾಪಾರಿಗೆ ಕಟ್ಟಿಗೆಯಿಂದ ಹೊಡೆದು ಕೊಲೆ!

ಅಬ್ದುಲ್ ರೆಹಮಾನ್ ಬಳಿ ತೆರಳಿದ್ದ ಹನುಮಂತ ಹಣ ನೀಡುವಂತೆ ಕೇಳಿದ್ದ. ತನ್ನ ಹಣ್ಣಿನ ಅಂಗಡಿ ಪಕ್ಕದಲ್ಲಿಯೇ ಮಲಗಿದ್ದ ಅಬ್ದುಲ್ ಅವರು ಇದರಿಂದ ಕೋಪಗೊಂಡು ಬೈಯ್ದಿದ್ದರು. ಈ ವಿಚಾರಕ್ಕೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ವಿಕೋಪಕ್ಕೆ ತೆರಳಿದೆ. ಇಬ್ಬರು ಹೊಡೆದಾಡಿಕೊಂಡಿದ್ದಾರೆ. ಬಳಿಕ ಅಲ್ಲಿಯೇ ಇದ್ದ ಕಟ್ಟಿಗೆ ತೆಗೆದುಕೊಂಡು ಅಬ್ದುಲ್ ರೆಹಮಾನ್ ಅವರಿಗೆ ಹನುಮಂತನು ಬಲವಾಗಿ ಹೊಡೆದಿದ್ದಾನೆ. ಬಳಿಕ ಅಬ್ದುಲ್ ರೆಹಮಾನ್ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ನಿವಾಸಿ ಹನುಮಂತಪ್ಪ ಕೊಲೆ ಮಾಡಿದ ಆರೋಪಿ ಎಂದು ಗುರುತಿಸಲಾಗಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *