ಹಾಸನ ತಾಲೂಕಿನ ಬಾಗೇ ಸಮೀಪ ಅರಸು ನಗರದಲ್ಲಿ ಮಳೆಯ ಕಾರಣ ಚಾಲಕನಿಗೆ ರಸ್ತೆ ಕಾಣದೆ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಾಯಗೊಂಡಿದ್ದಾರೆ.ಬೆಂಗಳೂರಿನ ದಾಸರಹಳ್ಳಿ ಮೂಲದ ಶರತ್, ಅಭಿಷೇಕ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬೆಂಗಳೂರು ಮೂಲದ ಟ್ರಾವೆಲ್ಸ್ ಒಂದರ ಮೂಲಕ ಬಾಡಿಗೆ ಕಾರಿನಲ್ಲಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಭಾರಿ ಮಳೆಯ ಕಾರಣ ಚಾಲಕನಿಗೆ ರಸ್ತೆ ಕಾಣದೆ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

