ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆ.75ರ ಬಿ.ಸಿ.ರೋಡ್- ಕೈಕಂಬದ ಸಮೀಪ ಮಂಗಳವಾರ ಮುಂಜಾನೆ 4 ಗಂಟೆ ಸುಮಾರಿಗೆ ಸಂಭವಿಸಿದೆ.ಜಯರಾಮ್ ಅವರು ತುಂಬೆ ಖಾಸಗಿ ಆಸ್ಪತ್ರೆಯ ಕ್ಯಾಂಟೀನ್ ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು. ಇಂದು ಮುಂಜಾನೆ ಇವರು ಮನೆಯಿಂದ ಕಾರಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

