ಬಂಟ್ವಾಳದ ಅಬ್ದುಲ್ ರಹೀಂ ಹತ್ಯೆ ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆಯಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಇದೀಗ ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ. ಅಬ್ದುಲ್ ರಹೀಮ್ ಹಾಗೂ ಕಲಂದರ್ ಶಫೀ ಮೇಲೆ ದಾಳಿ ಮಾಡಿದ ಆರೋಪಿಗಳ ಕೆಲ ಸುಳಿವು ಪತ್ತೆಯಾಗಿದೆ.ಡಿವೈಎಸ್ಪಿ ವಿಜಯ ಪ್ರಕಾಶ್ ನೇತೃತ್ವದಲ್ಲಿ 5 ಪೊಲೀಸ್ ತಂಡಗಳ ರಚನೆ ಮಾಡಲಾಗಿದೆ. ಈ ತಂಡದಲ್ಲಿ ಮಂಗಳೂರು ನಗರ ಸಿಸಿಬಿ ತಂಡ ಮತ್ತು ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂದಿ ಜಂಟಿ ಟೀಂ ರಚನೆ ಮಾಡಲಾಗಿದೆ. ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿನ ಕೊಳತಮಜಲು ಬಳಿ ನಡೆದಿದ್ದ ಈ ದಾಳಿಯಲ್ಲಿ ಜುಮ್ಮಾ ಮಸೀದಿ ಕಾರ್ಯದರ್ಶಿ ಹಾಗೂ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ಹತ್ಯೆ ನಡೆದಿದೆ.ಮೃತ ಅಬ್ದುಲ್ ರಹೀಂ ಪರಿಚಯಸ್ಥ ಇಬ್ಬರು ಸೇರಿದಂತೆ ಒಟ್ಟು 15 ಮಂದಿ ವಿರುದ್ದ ಎಫ್‌ಐಆರ್ ದಾಖಲಾಗಿದೆ. ರಹೀಂ ಪರಿಚಯಸ್ಥರೇ ಆಗಿರೋ ದೀಪಕ್, ಸುಮಿತ್ ಸೇರಿ 15 ಜನರ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news

