ನಲ್ಲಿ ಇಬ್ಬರು ನಡುವೆ ಗಲಾಟೆ ನಡೆಯುತ್ತಿದ್ದ ವೇಳೆ ಜಗಳ ಬಿಡಿಸಲು ಹೋದ ಮೂರನೇ ವ್ಯಕ್ತಿಗೆ ಬಿಯರ್ ಬಾಟಲಿಯಿಂದ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಈ ಘಟನೆ ಹೈದರಾಬಾದ್ನ ಉಪ್ಪಳ ಪ್ರದೇಶದ ವ್ಯಾಪ್ತಿಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ.ಭಾಸ್ಕರ್ ಪುತ್ರ ಪವನ್(26)ಮೃತ ಯುವಕ. ಮೃತನ ತಂದೆ ಭಾಸ್ಕರ್ ನಗರ ಅಂಬರ್‌ಪೇಟೆಯಲ್ಲಿ ಕಾರು ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಬಾರ್ ಮ್ಯಾನೇಜರ್ ವಿರುದ್ಧ ಹಾಗೂ ತನ್ನ ಮಗನನ್ನು ಕೊಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ತಂದೆ ಭಾಸ್ಕರ್ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

