ಉಪನಿರ್ದೇಶಕರೊಬ್ಬರು ಇರಾ ಗ್ರಾಮದ ವ್ಯಕ್ತಿಯೊಬ್ಬರಿಗೆ ಮನೆ ನಿರ್ಮಾಣಕ್ಕೆ ಕಟ್ಟಡಕಲ್ಲು ತೆಗೆದು ಸಮತಟ್ಟು ಮಾಡುವುದಕ್ಕಾಗಿ ಅನುಮತಿ ನೀಡಲು ಬುಧವಾರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳ ಬಲೆ ಬಿದ್ದಿರುವ ಘಟನೆ ವರದಿಯಾಗಿದೆ.ಉಳ್ಳಾಲ ತಹಶೀಲ್ದಾರರು ಸಮತಟ್ಟು ಮಾಡುವ ಸಲುವಾಗಿ ಜಮೀನಿನಲ್ಲಿ ಲಭ್ಯವಿರುವ ಕಟ್ಟಡಕಲ್ಲು ತೆಗೆಯಲು ಪ್ರಮಾಣಪತ್ರ, ದೃಢಿಕರಣ ಪತ್ರ ನೀಡಬಹುದಾಗಿದೆ ಎಂದು 2025 ಮಾರ್ಚ್ 21 ರಂದು ವರದಿ ಸಲ್ಲಿಸಿದ್ದರೂ ಕೂಡ ಗಣಿ ಇಲಾಖೆಯಿಂದ ಅನುಮತಿ ನೀಡಿಲ್ಲ ಎಂದು ಆರೋಪಿಸಲಾಗಿದೆ.ಉಪನಿರ್ದೇಶಕರಾದ ಕೃಷ್ಣವೇಣಿ ರವರು ಸಿಬ್ಬಂದಿ ಪ್ರದೀಪ್ ಎಂಬವರನ್ನು ಕರೆಯಿಸಿ ”ಫೈಲಿಗೆ 50,000 ರೂ. ತಗೊಳ್ಳಿ, ನಂತರ ಸೈನ್ ಮಾಡುವ” ಎಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರೆನ್ನಲಾಗಿದೆ.ಪೊಲೀಸ್ ಉಪಾಧೀಕ್ಷಕರಾದ ಡಾ. ಗಾನ ಪಿ ಕುಮಾರ್, ಸುರೇಶ್ ಕುಮಾರ್ ಪಿ., ಪೊಲೀಸ್ ನಿರೀಕ್ಷಕರಾದ ಭಾರತಿ ಜಿ., ಚಂದ್ರಶೇಖರ್ ಕೆ.ಎನ್. ಹಾಗೂ ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಮಂಜುನಾಥ, ರಾಜೇಂದ್ರ ನಾಯ್ಕ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

