Breaking News
Featured Video Play Icon

ಸರ್ಕಾರಕ್ಕೆ ತೀವ್ರ ಹಿನ್ನಡೆ: ಆದೇಶದಿಂದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ಸರ್ಕಾರಕ್ಕೆ ತೀವ್ರ ಹಿನ್ನಡೆ…

ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ವಿಚಾರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ನಲ್ಲಿ ತೀವ್ರ ಹಿನ್ನಡೆ, 43 ಕ್ರಿಮಿನಲ್ ಕೇಸ್ ಹಿಂಪಡೆದಿದ್ದ ಸರ್ಕಾರದ ಆದೇಶ ರದ್ದು,

ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳು ಸೇರಿದಂತೆ ಹಲವು ಪ್ರಭಾವಿಗಳ ವಿರುದ್ಧದ 43 ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆದು ಹೊರಡಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಬೆಂಗಳೂರಿನ ವಕೀಲ ಗಿರೀಶ್‌ ಭಾರದ್ವಾಜ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ ಅವರಿದ್ದ ನ್ಯಾಯಪೀಠ‌ ಈ ಆದೇಶ ನೀಡಿತು.ಅರ್ಜಿದಾರರ ಪರ ವಾದ ಮಂಡಿಸಿದ್ದ ವಕೀಲರು, ”ಪ್ರಕರಣಗಳ ವಾಪಸಾತಿಯಲ್ಲಿ ರಾಜ್ಯ ಸರ್ಕಾರದ ಪಾತ್ರ ಏನೂ ಇಲ್ಲ. ಆ ವಿಚಾರದಲ್ಲಿ ಸಾರ್ವಜನಿಕ ಅಭಿಯೋಜಕರು ನಿರ್ಧರಿಸಬೇಕು. ಆದರೆ, ಸುಪ್ರೀಂ ಕೋರ್ಟ್‌ ಹಲವು ಪ್ರಕರಣಗಳಲ್ಲಿ ರಾಜ್ಯ ಸರ್ಕಾರಕ್ಕೆ ಸಿಆರ್‌ಪಿಸಿ ಸೆಕ್ಷನ್‌ 321 ಅನ್ವಯ ಪ್ರಕರಣಗಳನ್ನು ವಾಪಸ್‌ ಪಡೆಯಲು ಅವಕಾಶವಿಲ್ಲವೆಂದು ಹೇಳಿದ್ದರೂ, ಸರ್ಕಾರ ಇಂತಹ ನಿಯಮಬಾಹಿರ ತೀರ್ಮಾನ ಕೈಗೊಂಡಿದೆ” ಎಂದು ಪೀಠಕ್ಕೆ ವಿವರಿಸಿದ್ದರು. ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳನ್ನು ಅನುಸರಿಸದೆ, 43 ಗಂಭೀರ ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆಯಲು ಪಬ್ಲಿಕ್‌ ಪ್ರಾಸಿಕ್ಯೂಟರ್‌ಗಳಿಗೆ ನಿರ್ದೇಶನ ನೀಡಿದೆ. ಕೇಸ್​​ಗಳು ಗಂಭೀರವಾಗಿರುವ ಕಾರಣ ಅಭಿಯೋಜನಾ ಇಲಾಖೆಯು ವಾಪಸ್‌ ಪಡೆಯುವ ಪ್ರಸ್ತಾವನೆಯನ್ನು ತಿರಸ್ಕರಿಸಿದೆ” ಎಂದು ಪೀಠಕ್ಕೆ ತಿಳಿಸಿದ್ದರು.

Share News

About Shaikh BigTv

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *