Breaking News

ರಾಜ್ಯದಲ್ಲಿ ಕೋಮುಗಲಭೆ, ಹತ್ಯೆಗಳು ಹೆಚ್ಚಳ ಹಿನ್ನೆಲೆ : `ವಿಶೇಷ ಕಾರ್ಯಪಡೆ ರಚನೆಗೆ ಸರ್ಕಾರ ಮಹತ್ವದ ಆದೇಶ.!

ರಾಜ್ಯದಲ್ಲಿ ಕೋಮುಗಲಭೆ, ಹತ್ಯೆಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸದಾಗಿ ವಿಶೇಷ ಕಾರ್ಯಪಡೆ ರಚನೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಹೊಸದಾಗಿ ಸ್ಥಾಪನೆಯಾಗುವ ವಿಶೇಷ ಕಾರ್ಯಪಡೆಯು ಮೂರು ಕಂಪನಿಗಳನ್ನು ಹೊಂದಿರಲಿದ್ದು, ಈ ಕಂಪನಿಗಳನ್ನು ಉಡುಪಿ, ಶಿವಮೊಗ್ಗ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸ್ಥಾಪಿಸುವುದು ಹಾಗೂ ಸದರಿ ವಿಶೇಷ ಕಾರ್ಯಪಡಯ ಕರ್ತವ್ಯಗಳು ಮತ್ತು ಜವಾಬ್ದಾರಿಗಳು ಕೆಳಕಂಡಂತೆ ಇರುತ್ತದೆ.ರಾಜ್ಯ ಸರ್ಕಾರವು ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿಯಲ್ಲಿ ವಿಶೇಷ ಕಾರ್ಯಪಡೆ ರಚನೆಗೆ ಆದೇಶ ಹೊರಡಿಸಿದೆ.ಒಟ್ಟು 656 ಹುದ್ದೆಗಳಲ್ಲಿ ಕೆಳಕಂಡ ಅಧಿಕಾರಿ/ಸಿಬ್ಬಂದಿಗಳ ಹುದ್ದೆಗಳನ್ನು ಬೇರ್ಪಡಿಸಿ, ಪ್ರತ್ಯೇಕವಾಗಿ ವಿಶೇಷ ಕಾರ್ಯಪಡೆಯನ್ನು ಸ್ಥಾಪಿಸಿದೆ.

Share News

About BigTv News

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *