ಗದಗ್ ಹುಬ್ಬಳ್ಳಿ ನಡುವೆ ಇರುವ ಭದ್ರಾಪುರ ಬಳಿ ಹುಬ್ಬಳ್ಳಿ ಗೆ ಹೊರಟಿದ್ದ ವೇಳೆ ಕಾರ್ ಅಪಘಾತವಾಗಿದೆ.ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ಜರುಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.ಕಾರ್ ನಲ್ಲಿದ್ದ ಮೂವರು ಧಾರುಣ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಕಾರ್ ನಲ್ಲಿದ್ದವರನ್ನು ಪೊಲೀಸರು ಗುರುತು ಪತ್ತೆ ಹಚ್ಚುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

