Breaking News

ಬಾಗಲಕೋಟೆ: ಹೃದಯಾಘಾತದಿಂದ’ ಯೋಧ ಸಾವು!

ರಾಜ್ಯದಲ್ಲಿ ಕಳೆದ ಒಂದು ವಾರದಲ್ಲಿ ಐವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಇದೀಗ ಬಾಗಲಕೋಟೆ ಜಿಲ್ಲೆ ಮೂಲದ ಯೋಧರೊಬ್ಬರು, ಚಂಡಿಘಡ ನಲ್ಲಿ ಸೇನಾ ತರಬೇತಿ ಪಡೆಯುವ ವೇಳೆ ಹೃದಯಾಘಾತದಿಂದ ಸಾವನಪ್ಪಿರುವ ಘಟನೆ ವರದಿಯಾಗಿದೆ.ಚಿಂಚಲಕಟ್ಟಿ ಎಲ್‌ಎಟಿ ಗ್ರಾಮದ ಯೋಧ ಉಪೇಂದ್ರ ಸೋಮನಾಥ ರಾಠೋಡ (23) ಬುಧವಾರ ಸೇನಾ ತರಬೇತಿ ವೇಳೆ ಹೃದಯಾಘಾತದಿಂದ ಚಂಡೀಗಢದಲ್ಲಿ ಮೃತಪಟ್ಟಿದ್ದಾರೆ. ಕಳೆದ ಮಾರ್ಚ್‌ನಲ್ಲಿ ಅಸ್ಸಾಂ ರೈಫಲ್ಸ್‌ನಲ್ಲಿ ಸೇನೆಗೆ ಆಯ್ಕೆಯಾಗಿದ್ದ ಉಪೇಂದ್ರ, ಮೂರು ತಿಂಗಳಿನಿಂದ ಚಂಡೀಗಢದಲ್ಲಿ ಸೇನಾ ತರಬೇತಿ ಪಡೆಯುತ್ತಿದ್ದರು. ಇಂದು ಪಾರ್ಥಿವ ಶರೀರ ಸ್ವಗ್ರಾಮಕ್ಕೆ ಆಗಮಿಸಲಿದ್ದು, ಅಂತ್ಯಕ್ರಿಯೆ ನೆರವೇರಲಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *