ಮೊಂಟೆಪದವು ಗ್ರಾಮದಲ್ಲಿ ಕುಸಿದ ಮನೆಯ ಅವಶೇಷಗಳಡಿ ಸಿಲುಕಿ ತಾಯಿ-ಮಗು ಸುಮಾರು 8 ಗಂಟೆ ಜೀವನ್ಮರಣದೊಂದಿಗೆ ಹೋರಾಡಿದ ಘಟನೆ ವರದಿಯಾಗಿದೆ. ಕೊಣಾಜೆಯ ಮಂಜನಾಡಿ ಗ್ರಾಮದ ಮೊಂಟೆಪದವು ಇತ್ತಲಕೋಡಿ ಕೊಪ್ಪಲ ಗುಡ್ಡ ಕುಸಿದು ವಾಸದ ಮನೆ ಮೇಲೆ ಬಿದ್ದಿದೆ. ಮನೆಯಲ್ಲಿ ಕಾಂತಪ್ಪ, ಪತ್ನಿ ಪ್ರೇಮಪೂಜಾರಿ, ಸೀತಾರಾಮ ಪೂಜಾರಿ, ಇವರ ಪತ್ನಿ ಅಶ್ವಿನಿ, ಮಕ್ಕಳಾದ ಪುತ್ರ ಆರ್ಯನ್, ಪುತ್ರಿ ಅರುಷಾ ಇದ್ದರು. ಬೆಳಗಿನಜಾವ 4 ಗಂಟೆ ಸುಮಾರಿಗೆ ಗುಡ್ಡ ಕುಸಿದು ಎರಡು ಬೃಹತ್ ಮರಗಳ ಸಮೇತ ಮನೆಯ ಮೇಲೆ ಬಿದ್ದಿದೆ.ಕಾರ್ಯಾಚರಣೆ ಬಳಿಕ ಆರ್ಯನ್ ಮೃತದೇಹವನ್ನು ಹೊರತೆಗೆಯಲಾಗಿದೆ. ಅಶ್ವಿನಿ ಮತ್ತು ಅರುಷಾ ಅವರ ರಕ್ಷಣಾ ಕಾರ್ಯ ಮಧ್ಯಾಹ್ನದವರೆಗೂ ನಡೆಯಿತು. ಕೊನೆಗೂ ತಾಯಿ-ಮಗುವನ್ನು ರಕ್ಷಿಸುವಲ್ಲಿ ರಕ್ಷಣಾ ಸಿಬ್ಬಂದಿಗಳು ಯಶಸ್ವಿಯಾದರು. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅರುಷಾ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 3ಕ್ಕೆ ಹೆಚ್ಚಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

