ಶುಕ್ರವಾರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್ ಅಧ್ಯಕ್ಷತೆಯಲ್ಲಿ ಕೋವಿಡ್ ನಿಯಂತ್ರಣ ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸಭೆ ನಡೆಯಿತು.ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ 30 ವರ್ಷದ ಮಹಿಳೆಗೆ ಸೋಂಕು ದೃಢವಾಗಿದೆ.ತೀವ್ರ ಜ್ವರ, ತಲೆ ನೋವು, ನೆಗಡಿ, ಕೆಮ್ಮು, ಉಸಿರಾಟದ ತೊಂದರೆ, ನ್ಯೂಮೋನಿಯಾ ಮತ್ತು ಆಯಾಸ, ವಾಸನೆ ಮತ್ತು ರುಚಿ ನಷ್ಟ ರೋಗದ ಲಕ್ಷಣಗಳಾಗಿವೆ ಎಂದರು.ರೋಗಲಕ್ಷಣಗಳು, ಚಿಹ್ನೆಗಳಿದ್ದರೆ 24/7 ಉಚಿತ ಆರೋಗ್ಯ ಸಹಾಯವಾಣಿ 104ಕ್ಕೆ ಕರೆ ಮಾಡಬೇಕು ಎಂದು ತಿಳಿಸಿದರು.ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಅತೀಕ್ ಪಾಷಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ್ ಕುಮಾರ್, ಜಿಲ್ಲಾ ಆರೋಗ್ಯ ಸರ್ವೇಕ್ಷಣಾಧಿಕಾರಿ ಡಾ. ಎಂ.ಎಸ್ ಕೃಷ್ಣಪ್ರಸಾದ್, ಡಾ. ಶಿವಕುಮಾರ್, ತಾಲ್ಲೂಕು ಅಬಕಾರಿ ಅಧೀಕ್ಷಕ ದೀಪಕ್, ಸಾರಿಗೆ ಇಲಾಖೆಯ ಎಂ ಶ್ರೀನಿವಾಸ್, ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

