Breaking News

ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಪೊಲೀಸರ ಅಮಾನತು!

ಶಂಕರ್ ಹಾಗೂ ಸುರೇಶ್ ಅವರು ಐಪಿಎಲ್‌ ಟಿಕೆಟ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದರು. ₹1,200 ಮೌಲ್ಯದ ಟಿಕೆಟ್ ಅನ್ನು ₹ 5,000ಕ್ಕೆ ಮಾರಾಟ ಮಾಡಲಾಗುತ್ತಿತ್ತು. ಟಿಕೆಟ್‌ ಖರೀದಿಸುವ ನೆಪದಲ್ಲಿ ಕಾರ್ಯಾಚರಣೆ ನಡೆಸಿದ್ದ ಗೋವಿಂದರಾಜ ನಗರ ಠಾಣೆಯ ಪೊಲೀಸರು ಇಬ್ಬರನ್ನೂ ಬಂಧಿಸಿದ್ದರು. ಆರೋಪಿಗಳ ವಿಚಾರಣೆ ನಡೆಸಿದಾಗ ಪೊಲೀಸ್ ಸಿಬ್ಬಂದಿಯ ಕೈವಾಡ ಇರುವುದು ಪತ್ತೆಯಾಗಿತ್ತು.ಆರೋಪಿಗಳಿಗೆ ಕಾಳಸಂತೆಯಲ್ಲಿ ಮಾರಾಟ ಮಾಡಲು ಟಿಕೆಟ್‌ ನೀಡಿದ್ದ ಆರೋಪದ ಮೇರೆಗೆ ವೆಂಕಟಗಿರಿಗೌಡ ಮತ್ತು ರವಿಚಂದ್ರ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿತ್ತು. ತನಿಖೆಯ ವೇಳೆ ಲಭಿಸಿದ ಮಾಹಿತಿ ಆಧರಿಸಿ ಇಲಾಖಾ ವಿಚಾರಣೆ ಕಾಯ್ದಿರಿಸಿ ಇಬ್ಬರನ್ನೂ ಅಮಾನತು ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *