Breaking News

ಥೈಲ್ಯಾಂಡ್‌ನ ಓಪ್ಲಾ ಸುಚಾತಾ ಚುಂಗಸಿರಿಗೆ 2025ರ ವಿಶ್ವ ಸುಂದರಿ ಕಿರೀಟ…

ವಿಶ್ವ ಸುಂದರಿ 2025 ಗ್ರ್ಯಾಂಡ್ ಫಿನಾಲೆ ಶನಿವಾರ ಸಂಜೆ ಹೈದರಾಬಾದ್‌ನಲ್ಲಿರುವ ಹೈಟೆಕ್ಸ್ ಕನ್ವೆನ್ಷನ್ ಸೆಂಟರ್‌ನಲ್ಲಿ ಅದ್ಧೂರಿಯಾಗಿ ನಡೆದಿದ್ದು, ಥೈಲ್ಯಾಂಡ್‌ನ ಓಪಲ್ ಸುಚಾತಾ ಚುವಾಂಗ್ಸ್ರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.ಅದ್ಧೂರಿಯಾಗಿ ನಡೆದ ಸಮಾರಂಭದಲ್ಲಿ ಹಾಲಿ ವಿಶ್ವ ಸುಂದರಿ ಕ್ರಿಸ್ಟಿನಾ ಪಿಸ್ಟೋ ಅವರು ಓಪ್ಲಾ ಸುಚಾತಾ ಚುಂಗಸಿರಿ ಅವರಿಗೆ ಕಿರೀಟ ಧಾರಣೆ ಮಾಡಿದರು.ಪ್ರತಿಷ್ಠಿತ ಮಿಸ್ ವರ್ಲ್ಡ್ ಕಿರೀಟ ಹಿಂದಿನ ಯಾವುದೇ ಕಿರೀಟಕ್ಕಿಂತ ಭಿನ್ನವಾಗಿದೆ.175.49 ಕ್ಯಾರೆಟ್‌ಗಳ 1,770 ವಜ್ರಗಳಿಂದ ಮಾಡಿದ, 18 ಕ್ಯಾರೆಟ್ ಬಿಳಿ ಚಿನ್ನದಲ್ಲಿ ಹೊಂದಿಸಲಾಗಿದೆ.ಈ ಕಿರೀಟದ ಮೌಲ್ಯ ಸುಮಾರು ಮೂರು ಕೋಟಿ ರೂಪಾಯಿ ಎನ್ನಲಾಗುತ್ತದೆ.ಇದರ ಜೊತೆಗೆ ವಿಜೇತೆ ಓಪಲ್ ಸುಚಾತ ಬರೋಬ್ಬರಿ 8.5 ಕೋಟಿ ರೂಪಾಯಿ ನಗದು ಬಹುಮಾನವನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *