ಶಿಡ್ಲಘಟ್ಟ ನಗರದ ರೈಲ್ವೆ ನಿಲ್ದಾಣದ ಬಳಿ ಮೇ 31, 2025ರಂದು ನಡೆದ ಒಂದು ಕರುಳು ಹಿಂಡುವ ಘಟನೆಯಲ್ಲಿ, 30 ವರ್ಷದ ಮಾನಸಿಕ ಅಸ್ವಸ್ಥಳಾದ ತುಂಬು ಗರ್ಭಿಣಿ ರೇಣುಕಾ ಬೀದಿಯಲ್ಲಿ ಶವವಾಗಿ ಕಂಡುಬಂದಿದ್ದಾಳೆ. ಜಂಗಮಕೋಟೆ ಮೂಲದ ಈ ಮಹಿಳೆ, ದಿಕ್ಕು ದೆಸೆಯಿಲ್ಲದೆ ಬೀದಿಗಳಲ್ಲಿ ಅಲೆದಾಡುತ್ತಿದ್ದವಳು.ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯ ಪಿಎಸ್‌ಐ ವೇಣುಗೋಪಾಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕರ್ತವ್ಯದ ಜೊತೆಗೆ, ಅವರು ರೇಣುಕಾಳ ಶವವನ್ನು ಸಂಸ್ಕಾರಕ್ಕೆ ಒಯ್ಯಲು ಆರ್ಥಿಕ ಸಹಾಯವನ್ನು ಒದಗಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

