Breaking News

ಕಾಸರಗೋಡು :ಟ್ಯಾಕ್ಸಿ ಚಾಲಕನನ್ನು ಗುಂಡಿಕ್ಕಿ ಹತ್ಯೆ!!

ಕಳೆದ 13 ವರ್ಷಗಳಿಂದ ಬಷೀರ್ ಅವರು ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದರು. ಅವರು ಮೊದಲು ಹೌಸ್ ಡ್ರೈವರ್ ವೀಸಾದ ಮೇಲೆ ಸೌದಿಗೆ ಆಗಮಿಸಿದ್ದರು ಎನ್ನಲಾಗಿದೆ.ಬಷೀರ್, ತನ್ನ ನಿವಾಸದ ಬಳಿ ತನ್ನ ಟ್ಯಾಕ್ಸಿಯನ್ನು ಸ್ವಚ್ಛಗೊಳಿಸುತ್ತಿದ್ದಾಗ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ. ಬಿಶಾದಿಂದ ಸುಮಾರು 35 ಕಿಲೋಮೀಟರ್ ದೂರದಲ್ಲಿರುವ ರಸ್ತೆಯಲ್ಲಿ ರವಿವಾರ ಮಧ್ಯರಾತ್ರಿಯ ಸುಮಾರಿಗೆ ಗುಂಡಿನ ದಾಳಿ ನಡೆದಿದೆ ಎನ್ನಲಾಗಿದೆ. ದಾಳಿಕೋರರು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ.ಗುಂಡಿನ ದಾಳಿ ಕೇಳಿ ಸುತ್ತಮುತ್ತಲಿನ ಪ್ರದೇಶದ ಜನ ಒಮ್ಮೆಲೇ ಬೆಚ್ಚಿಬಿದ್ದಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿ ನೋಡಿದಾಗ ಬಷೀರ್ ಅವರು ಕಾರಿನೊಳಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಅದನ್ನು ಕಂಡ ಈಜಿಪ್ಟ್ ನಾಗರಿಕರೋರ್ವರು ಬಷೀರ್ ಅವರನ್ನು ಆಸ್ಪತ್ರೆಗೆ ದಾಖಲಿಸಿದರು. ಅಷ್ಟರಲ್ಲಿ ಅವರು ಮೃತಾಪಟ್ಟಿದ್ದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *