ಬಾಲಕಿಯ ಕಾಲು ಮುರಿತವಾಗಿತ್ತು. ಉತ್ತಮ ಚಿಕಿತ್ಸೆ ಸಿಗುತ್ತದೆ ಎಂಬ ನಿರೀಕ್ಷೆಯೊಂದಿಗೆ ಪೋಷಕರು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಮೂಳೆ ಸರಿಯಾಗಬೇಕು ಎಂದರೆ ಆಪರೇಷನ್ ಮಾಡಲೇಬೇಕು ಎಂದು ವೈದ್ಯರು ಸಲಹೆ ನೀಡಿದ್ದರು. ಅದರಂತೆ ಸಾನ್ವಿಗೆ 29ರ ರಾತ್ರಿಯೇ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ನಂತರ ಬಾಲಕಿ ಚೇತರಿಸಿಕೊಂಡಿದ್ದು, ಪೋಷಕರ ಜೊತೆಯೂ ಮಾತನಾಡಿದ್ದಳು. ತಾನು ಬೇಗ ಚೇತರಿಸಿಕೊಳ್ಳುವುದಾಗಿ ಪೋಷಕರಿಗೂ ಧೈರ್ಯ ಹೇಳಿದ್ದಾಳೆ. ಆದರೆ, ಶನಿವಾರ ರಾತ್ರಿ ಇದ್ದಕ್ಕಿದ್ದಂತೆ ಬಾಲಕಿ ಮೃತಪಟ್ಟಿದ್ದಾಳೆ. ಬಾಲಕಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.ಮಳವಳ್ಳಿಯ ನೆಲ್ಲೂರು ಗ್ರಾಮದ ನಿಂಗರಾಜು ಮತ್ತು ರಂಜಿತಾ ದಂಪತಿ ಪುತ್ರಿ ಸಾನ್ವಿ (7) ಮೃತಪಟ್ಟಿದ್ದು, ಮಿಮ್ಸ್ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂಬ ಗಂಭೀರ ಆರೋಪ ಮಾಡಲಾಗಿದೆ. ಮೇ 29 ರಂದು ಮನೆಯಲ್ಲಿದ್ದ ಟೈಲ್ಸ್ ಒಂದು ಬಾಲಕಿ ಪಾದದ ಮೇಲೆ ಬಿದ್ದಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news

