Breaking News

ನೆಲಮಂಗಲ: ಕಾರಿನ ಗ್ಲಾಸ್ ಒಡೆದು ₹11.5 ಲಕ್ಷ ಕಳ್ಳತನ!

ಕಾರು ನಿಲ್ಲಿಸಿ ಮಿಕ್ಸಿ ರಿಪೇರಿ ಮಾಡಿಸಲು ಹೋದಾಗ, ಕಾರಿನ ಗ್ಲಾಸ್ ಒಡೆದು 11.5 ಲಕ್ಷ ರೂ. ನಗದು ಹಣ ಕದ್ದು ಪರಾರಿಯಾಗಿದ್ದಾರೆ.ಹಣ ಕಳೆದುಕೊಂಡ ವ್ಯಕ್ತಿ ಅತೀಕ್ ರೆಹಮಾನ್ ಆಗಿದ್ದಾರೆ. ಅತೀಕ್ ರೆಹಮಾನ್ ದಾಬಸ್ ಪೇಟೆಯಲ್ಲಿ ಲಾಜಿಸ್ಟಿಕ್ಸ್ ವ್ಯವಹಾರ ನಡೆಸುತ್ತಿದ್ದು, ತಮ್ಮ ಅಣ್ಣನ ಸೂಚನೆಯಂತೆ ಬ್ಯಾಂಕ್‌ನಿಂದ ಹಣವನ್ನು ತೆಗೆದು ತಂದಿದ್ದರು.ಪೊಲೀಸರು ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳನ್ನು ವಿಸ್ತೃತವಾಗಿ ಪರಿಶೀಲಿಸುತ್ತಿದ್ದು, ಕಳ್ಳರನ್ನು ಪತ್ತೆ ಹಚ್ಚಲು ವಿಶೇಷ ತಂಡ ರಚಿಸಲಾಗಿದೆ. ನಗರದಲ್ಲಿ ಈ ರೀತಿಯ ಧೈರ್ಯದ ಕಳ್ಳತನದ ಘಟನೆ ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದ್ದು, ಸೂಕ್ತ ಭದ್ರತೆ ಹಾಗೂ ಎಚ್ಚರಿಕೆಯಿಂದ ನಡೆದುಕೊಳ್ಳುವಂತೆ ಪೊಲೀಸರು ಮನವಿ ಮಾಡಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *