ವಿಶ್ವವಿದ್ಯಾಲಯದಲ್ಲಿ 19 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಿರಿಯಾನಿ ಮಾರಾಟಗಾರ ಜ್ಞಾನಶೇಖರನ್‌ಗೆ ಚೆನ್ನೈ ಮಹಿಳಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಜೊತೆಗೆ 90,000 ರೂಪಾಯಿ ದಂಡ ವಿಧಿಸಲಾಗಿದ್ದು, ಕನಿಷ್ಠ 30 ವರ್ಷಗಳ ಕಾಲ ಜೈಲಿನಲ್ಲಿ ಇರಬೇಕೆಂದು ನ್ಯಾಯಾಧೀಶೆ ಎಂ. ರಾಜಲಕ್ಷ್ಮಿ ತೀರ್ಪಿನಲ್ಲಿ ತಿಳಿಸಿದ್ದಾರೆ.ವಿಚಾರಣೆಯ ವೇಳೆ, ಜ್ಞಾನಶೇಖರನ್ ಚೆನ್ನೈನ ಹಲವು ಮನೆಗಳಲ್ಲಿ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಪೊಲೀಸರು ಆತನಿಂದ 100 ಪೌಂಡ್ ಚಿನ್ನ ಮತ್ತು ಐಷಾರಾಮಿ ಎಸ್‌ಯುವಿಯನ್ನು ವಶಪಡಿಸಿಕೊಂಡಿದ್ದಾರೆ. ಈ ಘಟನೆಯು ಆರೋಪಿಯ ಕ್ರಿಮಿನಲ್ ಹಿನ್ನೆಲೆಯನ್ನು ಬಹಿರಂಗಪಡಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

