Breaking News

ಹಾಸನ: ಭಾರಿ ಮಳೆ, ಇಬ್ಬರ ಸಾವು!!

ಸಕಲೇಶಪುರ ತಾಲ್ಲೂಕಿನ ತಿನಗನಹಳ್ಳಿಯಲ್ಲಿ ನಂಜಯ್ಯ (56) ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ. ನಂಜಯ್ಯ ಮೇ 26ರಂದು ಜಮೀನಿಗೆ ತೆರಳಿ ಕಾಣೆಯಾಗಿದ್ದರು. ನಿರಂತರ ಮಳೆಯಿಂದ ಶೋಧಕ್ಕೆ ಅಡಚಣೆಯಾಗಿತ್ತು.ಮಳೆ ಕಡಿಮೆಯಾದ ಬಳಿಕ ಹುಡುಕಾಟ ನಡೆಸಿದ್ದು, ಶನಿವಾರ ಸಂಜೆ ತಿನಗನಹಳ್ಳಿಯಲ್ಲಿ ಅವರ ಶವ ಪತ್ತೆಯಾಗಿದೆ.ನಂಜಯ್ಯನವರ ಹುಡುಕಾಟದ ವೇಳೆ ಚಿಕ್ಕಮಗಳೂರು ಜಿಲ್ಲೆಯ ಕಲ್ಲುದೊಡ್ಡಿ ಗ್ರಾಮದ ಕಾರ್ಮಿಕ ಮುರುಗೇಶ್ (65) ಶವವೂ ಪತ್ತೆಯಾಗಿದ್ದು, ಕಾಫಿ ತೋಟದಲ್ಲಿ ಕೆಲಸ ಮಾಡುವ ವೇಳೆ ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಈ ಎರಡೂ ಘಟನೆಗಳು ಸಕಲೇಶಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿವೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *