Breaking News

ಸಿಕ್ಕಿಂ: ಭೂಕುಸಿತ, ಯೋಧರ ದುರ್ಮರಣ, 9ಮಂದಿ ಕಣ್ಮರೆ!!

ಲಾಚೆನ್ ಜಿಲ್ಲೆಯ ಚಾಟೆನ್‌ನಲ್ಲಿರು ಸೇನಾ ಶಿಬಿರದ ಬಳಿ ಭಾನುವಾರ ಸಂಜೆ 7 ಗಂಟೆಗೆ ಭೂಕುಸಿತ ಸಂಭವಿಸಿದ್ದು, ಇದುವರೆಗೆ ಮೂವರು ಸೈನಿಕರ ಮೃತದೇಹಗಳನ್ನು ಪತ್ತೆಹಚ್ಚಲಾಗಿದೆ, ಆದರೆ 9 ಸೈನಿಕರು ಇನ್ನೂ ಕಾಣೆಯಾಗಿದ್ದಾರೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ಹೇಳಿಕೆಯಲ್ಲಿ ತಿಳಿಸಿದ್ದಾರೆ.ಭಾರತೀಯ ಸೇನೆಯು ತಕ್ಷಣವೇ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಪ್ರತಿಕೂಲ ವಾತಾವರಣದ ನಡುವೆಯೇ ಕಾರ್ಯಾಚರಣೆ ಮುಂದುವರಿದಿದೆ. ನಾಲ್ವರನ್ನು ರಕ್ಷಿಸಲಾಗಿದ್ದು, ಅವರಿಗೆ ಗಾಯಗಳಾಗಿವೆ. ಆದರೆ ಮೂವರು ಯೋಧರು ಕೊನೆಯುಸಿರೆಳೆದಿದ್ದಾರೆ. ಮೃತರನ್ನು ಹವಾಲ್ದಾರ್ ಲಖ್ವಿಂದರ್ ಸಿಂಗ್, ಲ್ಯಾನ್ಸ್ ನಾಯಕ್ ಮುನೀಶ್ ಠಾಕೂರ್ ಮತ್ತು ಪೋರ್ಟರ್ ಅಭಿಷೇಕ್ ಲಖಾಡಾ ಎಂದು ಗುರುತಿಸಲಾಗಿದೆ. ಕಣ್ಮರೆಯಾಗಿರುವ ಸಿಬ್ಬಂದಿಯನ್ನು ಪತ್ತೆಹಚ್ಚಲು ಮತ್ತು ರಕ್ಷಿಸಲು ರಕ್ಷಣಾ ತಂಡಗಳು ಹಗಲಿರುಳು ಶ್ರಮಿಸುತ್ತಿವೆ ಎಂದು ಸೇನೆ ತಿಳಿಸಿದೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *