ಭಾನುವಾರ ರಾತ್ರಿಯಡೀ ಸುರಿದ ಭಾರೀ ಮಳೆಗೆ ಬೆಂಗಳೂರಿಗರು ತತ್ತರಿಸಿ ಹೋಗಿದ್ದಾರೇ. ಇಷ್ಟಕ್ಕೇ ಮುಗಿದಿಲ್ಲ, ಇನ್ನೂ 5 ದಿನ ಇದೇ ರೀತಿಯ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕ ರಾಜ್ಯದಾದ್ಯಂತ ಮುಂಗಾರುಪೂರ್ವ ಮಳೆಯ ಅಬ್ಬರ ಜೋರಾಗಿದೆ.ಬೆಳಗಾವಿ, ಧಾರವಾಡ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಈ ಜಿಲ್ಲೆಗಳಿಗೆ ನಾಳೆ ನಾಡಿದ್ದು ಆರೆಂಜ್ ಅಲರ್ಟ್ ನೀಡಲಾಗಿದೆ. ಉಳಿದಂತೆ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೆಲ ಭಾಗದಲ್ಲಿ ಆರೆಂಜ್ ಅಲರ್ಟ್ ನೀಡಿದ್ದು, ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಸಂಭವಿಸುವ ಸಾಧ್ಯತೆ ಇದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

