Breaking News

ಪುತ್ತೂರು : ಹಿಂದೂ ಮುಖಂಡರ ಮನೆಯಲ್ಲಿ ಪೊಲೀಸ್ ಪರಿಶೀಲನೆ!!

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಅವರ ಸೂಚನೆಯಂತೆ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಂಘಟನೆಗಳ ಪ್ರಮುಖರ ಮನೆಗಳಿಗೆ ರಾತ್ರಿ ವೇಳೆ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಾರಂಭಿಸಿದ್ದರು.ಮಧ್ಯರಾತ್ರಿ ವೇಳೆ ಹಿಂದೂ ಸಂಘಟನೆಗಳ ಮುಖಂಡರ ಮನೆಗೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳ ಪ್ರಮುಖರು ಕಡಬ ಪೊಲೀಸ್ ಠಾಣೆ ಎದುರು ಹಾಜರಾಗಿದ್ದಾರೆ. ಪೊಲೀಸರ ಈ ನಡೆ ವಿರೋಧಿಸಿ ಠಾಣೆ ಎದುರು ಹಾಜರಾಗಿದ್ದಕ್ಕೆ ಎಫ್​ಐಆರ್​ ದಾಖಲಿಸಲಾಗಿದೆ.ಯಾವುದೇ ಪೂರ್ವಾನುಮತಿ ಪಡೆಯದೇ ಅಕ್ರಮವಾಗಿ ಗುಂಪು ಕಟ್ಟಿಕೊಂಡು ಕಡಬ ಠಾಣೆಯ ಮುಂಭಾಗದಲ್ಲಿ ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸಿರುತ್ತಾರೆ ಅಂತ ದೂರಿನಲ್ಲಿ ಉಲ್ಲೇಖಿಸಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *