Breaking News

ಬೆಂಗಳೂರು: ಪಿಸ್ತೂಲ್‌ ಬೆದರಿಕೆ ಆರೋಪ, ASI ವಿರುದ್ಧ ತನಿಖೆ.

ASI ಒಬ್ಬರು ಸಾರ್ವಜನಿಕ ಸ್ಥಳದಲ್ಲಿ ಪಿಸ್ತೂಲ್‌ ಹಿಡಿದು ಬೆದರಿಕೆ ಹಾಕಿದ್ದ ಆರೋಪವಿದ್ದು, ಈ ಸಂಬಂಧ ಹಿರಿಯ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಸಂಬಂಧ ಪೊಲೀಸ್‌ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಮಡಿವಾಳದ ಹೋಟೆಲ್‌ನಲ್ಲಿ ಆಡಳಿತ ಮಂಡಳಿ ಹಾಗೂ ಕಾರ್ಮಿಕರ ಮಧ್ಯೆ ಸಂಬಳದ ವಿಚಾರಕ್ಕೆ ಮೂರು ತಿಂಗಳಿಂದ ಗಲಾಟೆ ನಡೆಯುತ್ತಿತ್ತು. ಗಲಾಟೆ ಸಂಬಂಧ ಕಾರ್ಮಿಕನೊಬ್ಬ ಪೊಲೀಸ್ ಕಂಟ್ರೋಲ್‌ಗೆ ರೂಂಗೆ ಕರೆ ಮಾಡಿದ್ದ. ಕರೆ ಆಧರಿಸಿ ಸ್ಥಳಕ್ಕೆ ಹೋಗಿ ವಿಚಾರಿಸಿದ್ದೇನೆ. ಪಿಸ್ತೂಲ್‌ನ ಪೌಚ್ ಕಿತ್ತುಹೋಗಿತ್ತು. ಕೈನಲ್ಲಿ ಪಿಸ್ತೂಲ್ ಹಿಡಿದುಕೊಂಡು ಮಾಹಿತಿ ಪಡೆದಿದ್ದೇನೆ’ ಎಂದು ಪ್ರಾಥಮಿಕ ತನಿಖೆ ವೇಳೆ ಕುಮಾರ್‌ ಹೇಳಿಕೆ ನೀಡಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *