ಬಾಲಾಜಿ ಲೇಔಟ್‌ನ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ ನೇಪಾಳ ಮೂಲದ ದಂಪತಿಗಳಾದ ಲೋಕೇಶ್ ಮತ್ತು ಅಮೃತ ದಂಪತಿಗಳ ಮಗುವಿನ ಮೇಲೆ ಈ ದೌರ್ಜನ್ಯ ನಡೆದಿದೆ.ತಂದೆಯೊಬ್ಬ ತನ್ನ ಹೆಣ್ಣು ಮಗುವಿನ ಮೇಲೆ ಮಾತು ಕೇಳಲಿಲ್ಲ ಎಂಬ ಕಾರಣಕ್ಕೆ ಕ್ರೂರವಾಗಿ ಹಲ್ಲೆ ಮಾಡಿದ್ದಾನೆ.ವಿದ್ಯಾರಣ್ಯಪುರ ಹೊಯ್ಸಳ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಮಗುವನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿ ತಂದೆ ಲೋಕೇಶ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣವನ್ನು ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 323 ಮತ್ತು ಜುವೆನೈಲ್ ಜಸ್ಟಿಸ್ ಆಕ್ಟ್‌ನ ಅಡಿಯಲ್ಲಿ ದಾಖಲಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

