ಆರ್‌ಸಿಬಿ ತಂಡದ ಬಹುನಿರೀಕ್ಷಿತ ಗೆಲುವಿಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಆರ್‌ಸಿಬಿ ತಂಡಕ್ಕೆ ಅಭಿನಂದನೆಗಳು ಸಲ್ಲಿಸಿದ್ದಾರೆ. ಕೊನೆಗೂ ಕಪ್ ಗೆಲುವ ಕನಸು ನನಸಾಗಿದೆ. ಈ ಸಲಾ ಕಪ್ ನಮ್ದೆ! ಎಂದು ಸಾಮಾಜಿಕ ಜಾಲತಾಣದಲ್ಲಿ ಶುಭ ಆರೈಸಿದ್ದಾರೆ.ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್ ಮುಡಿಗೇರಿಸಿಕೊಂಡ ಆರ್‌ಸಿಬಿ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಒಂದು ತಂಡವಾಗಿ ಸಂಘಟಿತ ಪ್ರದರ್ಶನ ನೀಡುವ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸನ್ನು ಈ ದಿನ ಆರ್‌ಸಿಬಿಯ ಹುಡುಗರು ನನಸಾಗಿಸಿದ್ದಾರೆ.ಕೊನೆಯದಾಗಿ, “ಈ ಸಲ ಕಪ್ ನಮ್ದೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

