ಕರ್ನಾಟಕ ಹಾಲು ಒಕ್ಕೂಟ ಒಂದೇ ದಿನ ಸಾರ್ವಕಾಲಿಕ ಗರಿಷ್ಠ 1.06 ಕೋಟಿ ಲೀಟರ್ ಹಾಲು ಸಂಗ್ರಹಿಸುವ ಮೂಲಕ ರಾಜ್ಯದ ಡೈರಿ ವಲಯದಲ್ಲಿ ಹೊಸ ದಾಖಲೆ ಸೃಷ್ಟಿಸಿದೆ. ಮೇ 22 ರ ನಂತರ ಈ ದಾಖಲೆ ಸಾಧ್ಯವಾಗಿದೆ. ಅನುಕೂಲಕರವಾದ ಮುಂಗಾರು ಮಳೆ ಮತ್ತು ಹಸಿರು ಮೇವಿನ ಲಭ್ಯತೆಯ ಕಾರಣ ಈ ದಾಖಲೆ ಮಾಡುವುದು ಕೆಎಂಎಫ್ಗೆ ಸಾಧ್ಯವಾಗಿದೆ ಎನ್ನಲಾಗಿದೆ.ಕೆಎಂಎಫ್ ಮತ್ತು ಅದರ ಅಂಗಸಂಸ್ಥೆಗಳಾದ ಹಾಲು ಒಕ್ಕೂಟಗಳು ಈಗಾಗಲೇ ಹಾಲು, ಮೊಸರು, ಮಜ್ಜಿಗೆ, ಲಸ್ಸಿ, ನಂದಿನಿ ಹಲ್ವಾ, ಬ್ರೆಡ್, ಬನ್ಗಳು ಮತ್ತು ಐಸ್ ಕ್ರೀಮ್ ಸೇರಿದಂತೆ 150 ಕ್ಕೂ ಹೆಚ್ಚು ಉತ್ಪನ್ನಗಳನ್ನು ಮಾರಾಟ ಮಾಡುತ್ತಿವೆ. ಇದೀಗ ಹೊಸ ಬೇಕರಿ ಉತ್ಪನ್ನಗಳ ಸೇರ್ಪಡೆಯೊಂದಿಗೆ, ಕೆಎಂಎಫ್ ಉದ್ಯಮ ಮತ್ತಷ್ಟು ವಿಸ್ತರಣೆಯಾದಂತಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

